ಅನುಮತಿ ಪಡೆಯದೆ ರೋಡ್ ಶೋ ನಡೆಸಿದ ದಳಪತಿ; ವಿಜಯ್ ಮೇಲೆ ಕೇಸ್ ದಾಖಲು!
ಚೆನ್ನೈ:ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಈ ನಡುವೆ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ Thalapathy Vijay ವಿರುದ್ಧ ಪ್ರಕರಣ ದಾಖಲಾಗಿರುವುದು ಗಮನ ಸೆಳೆದಿದೆ. ಗುರುವಾರ (ಏಪ್ರಿಲ್ 16) ಚೆನ್ನೈನ ಮೆಂಬ್ಲಮ್ ಪೊಲೀಸ್ ಠಾಣೆಯಲ್ಲಿ ವಿಜಯ್ ಸೇರಿದಂತೆ ಬುಸ್ಸಿ ಆನಂದ್ ಮತ್ತು ಅಪ್ಪನ್ನು ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು…

