ಮಂಡ್ಯ ಪೊಲೀಸರ ಭರ್ಜರಿ ಬೇಟೆ: 27 ಕದ್ದ ಬೈಕ್‌ಗಳ ವಶ, ಅಂತರಜಿಲ್ಲಾ ಬೈಕ್ ಕಳ್ಳರ ಗ್ಯಾಂಗ್ ಅರೆಸ್ಟ್!
ಸಕ್ಕರೆ ನಾಡು ಮಂಡ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬೈಕ್ ಸವಾರರ ನಿದ್ದೆಗೆಡಿಸಿದ್ದ ಬೈಕ್ ಕಳ್ಳರ ಜಾಲವನ್ನು ಮಂಡ್ಯ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸಾರ್ವಜನಿಕ ಸ್ಥಳಗಳು, ಆಸ್ಪತ್ರೆಗಳ ಮುಂಭಾಗ ಮತ್ತು ವಸತಿ ಪ್ರದೇಶಗಳಲ್ಲಿ ನಿಲ್ಲಿಸಲಾಗುತ್ತಿದ್ದ ದುಬಾರಿ ಬೈಕ್‌ಗಳನ್ನು ಕ್ಷಣಾರ್ಧದಲ್ಲಿ ಮಾಯ ಮಾಡುತ್ತಿದ್ದ ಐವರು ಕುಖ್ಯಾತ ಕಳ್ಳರನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 27 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಂಡ್ಯ ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆದಿದ್ದು ಹೇಗೆ? ಮಂಡ್ಯ…

