ಚಿಕ್ಕಬಳ್ಳಾಪುರ ಶಾಕ್: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜು ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಕಾನ್ಸ್‌ಟೇಬಲ್ ಭದ್ರತಾ ಕರ್ತವ್ಯದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿನಿಮಾ ನಟರು ಹಾಗೂ ನಟಿಯರು ಆಗಮಿಸಿದ್ದರಿಂದ ಪೊಲೀಸರು ಗೇಟ್ ಬಳಿ ಭದ್ರತೆಗಾಗಿ ನಿಯೋಜಿತರಾಗಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳು ಸೈಲೆನ್ಸರ್ ಬದಲಾಯಿಸಿದ ಬೈಕ್‌ಗಳಲ್ಲಿ ಕರ್ಕಶ ಶಬ್ದ ಮಾಡುತ್ತಾ ಓಡಾಡುತ್ತಿದ್ದರೆಂದು ಹೇಳಲಾಗಿದೆ….

Read More

ಆನೇಕಲ್ ಘೋರ ದುರಂತ: ಅಳಿಯ ಸಾವು, ಮಾವ–ಬಾಮೈದ ಬಂಧನ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಕಾವಲಹೊಸಹಳ್ಳಿಯಲ್ಲಿ ಹೆಂಡತಿ ಮತ್ತು ಮಕ್ಕಳನ್ನು ಮರಳಿ ಕರೆತರಲು ಬಂದಿದ್ದ ಅಳಿಯ ನವೀನ್ (36) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಇದೀಗ ಕೊಲೆ ಪ್ರಕರಣವಾಗಿ ತಿರುಗಿದೆ. ಮೂಲತಃ ತಮಿಳುನಾಡು ನಿವಾಸಿಯಾದ ನವೀನ್, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತ್ನಿ ಸುಚಿತ್ರಾ ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದ ಕಾರಣ ಅವರನ್ನು ಮನೆಗೆ ಮರಳಿ ಕರೆದೊಯ್ಯಲು ಆಗಮಿಸಿದ್ದರು. ಆದರೆ, ಈ ವೇಳೆ ಗಂಭೀರ ಘಟನೆ ನಡೆದಿದೆ. ಘಟನೆಯ ದಿನ ನವೀನ್ ಮದ್ಯಪಾನ ಮಾಡಿ ಪತ್ನಿಯ ಮನೆ ಬಳಿ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ – 2.25 ಕೋಟಿ ವೆಚ್ಚ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕೈದಿಗಳ ಮೇಲೆ ಇನ್ನಷ್ಟು ಕಟ್ಟುನಿಟ್ಟಿನ ನಿಗಾವಹಿಸಲು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಈ ಯೋಜನೆಗೆ ಕಾರಾಗೃಹ ಇಲಾಖೆ 2.25 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದಕ್ಕೂ ಮೊದಲು ಜೈಲಿನಲ್ಲಿ ಎಐ ಕ್ಯಾಮೆರಾ ಬಳಸಿ ಕೈದಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುತ್ತಿತ್ತು. ಜೊತೆಗೆ ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿತ್ತು. ಇದೀಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಜೈಲಿನ…

Read More

ಚಿಕ್ಕಬಾಣಾವರ ದುರಂತ: ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಮಗು ಮೃತ

ಬೆಂಗಳೂರು: ಆಟವಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಗೌಸಿಯಾ (5) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಅಣ್ಣ ಇಮಾಮ್ ಮತ್ತು ತಂಗಿ ಶಕಿಲಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ 3 ವರ್ಷದ ಮಗು ಸುಮಯ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇಮಾಮ್ ರಮೀಜಾ ದಂಪತಿಯ ಮಕ್ಕಳಾದ ಗೌಸಿಯಾ, ಇಮಾಮ್ ಹಾಗೂ…

Read More

ಈಜಲು ಹೋದ ಇಬ್ಬರು ಯುವಕರು ಕೆರೆಯಲ್ಲಿ ನೀರುಪಾಲು

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಚ್ಚರಮಾಕಲಹಳ್ಳಿ ಬಳಿ ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ಇಬ್ಬರು ಯುವಕರು ನೀರುಪಾಲಾಗಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಮೃತರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇಬ್ಬರೂ ಗಾರೆ ಕೆಲಸಕ್ಕೆ ಪಚ್ಚರಮಾಕಲಹಳ್ಳಿಗೆ ಬಂದಿದ್ದರು. ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದ ತಂಪಿಗಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಕೆರೆಯ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ನೀರಿನಲ್ಲಿ ಮುಳುಗಿ…

Read More

ಲಿವ್ ಇನ್ ಸಂಬಂಧದಲ್ಲಿದ್ದ ಯುವಕ ಆತ್ಮಹತ್ಯೆ – ಮಹಿಳೆ ನಾಪತ್ತೆ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ 28 ವರ್ಷದ ತಿಪ್ಪೇಸ್ವಾಮಿ ಮೃತ ಯುವಕ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಹಿಳೆ ಹಾಗೂ ತಿಪ್ಪೇಸ್ವಾಮಿ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಬಳಿಕ ಪ್ರೀತಿಗೆ ಬಿದ್ದಿದ್ದರು. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆ, ಕಳೆದ ಎರಡು ತಿಂಗಳ ಹಿಂದೆ…

Read More

ಬೀದರ್‌ನಲ್ಲಿ ಬೀದಿ ನಾಯಿ ದಾಳಿ: 5 ತಿಂಗಳ ಕಂದಮ್ಮ ದುರ್ಮರಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಬೀದಿ ನಾಯಿಯ ದಾಳಿಗೆ 5 ತಿಂಗಳ ಹಸುಗೂಸು ಶಿವಾನಿ ಸಾವನ್ನಪ್ಪಿದ್ದಾಳೆ. ಸುಧಾ ಮತ್ತು ಸಿದ್ದಪ್ಪ ದಂಪತಿಯ ನಾಲ್ಕನೇ ಹೆಣ್ಣು ಮಗು ಶಿವಾನಿಯಾಗಿದ್ದು, ತಾಯಿ ಮನೆಯ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮಗುವನ್ನು ಮನೆಯ ಪಡಸಾಲೆಯಲ್ಲಿ ಮಲಗಿಸಲಾಗಿತ್ತು. ಇದೇ ವೇಳೆ ಏಕಾಏಕಿ ಮನೆಗೆ ನುಗ್ಗಿದ ಬೀದಿ ನಾಯಿ ಮಗುವಿನ ಮೇಲೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ,…

Read More

ಬಿಟ್‌ಕಾಯಿನ್ ಹಗರಣ ಪ್ರಕರಣ: ಇಡಿಯಿಂದ ಶ್ರೀಕಿ ಸೇರಿ ಮೂವರು ಬಂಧನ

ಬೆಂಗಳೂರು ನಗರವನ್ನು ತಲ್ಲಣಗೊಳಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣ ಸಂಬಂಧ ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶುಕ್ರವಾರ ರಾತ್ರಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಇಂದು ಬೆಳಿಗ್ಗೆ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳನ್ನು 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಈ ಪ್ರಕರಣ ರಾಜ್ಯದ ಬಹುಕೋಟಿ ಕ್ರಿಪ್ಟೋಕರೆನ್ಸಿ…

Read More

ತಾಯಿಯ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಸರ್ಕಾರಿ ನೌಕರ ಅರೆಸ್ಟ್

ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ತಾಯಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಡಿ-ಗ್ರೂಪ್ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ಅಜಯ್ ಮದಕರಿ (37) ಎಂದು ಗುರುತಿಸಲಾಗಿದ್ದು, ಆತ ಸರ್ಕಾರಿ ಆಸ್ಪತ್ರೆಯಲ್ಲಿ ಡಿ-ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಬಾಲಕಿಯನ್ನು ತನ್ನ ಕ್ವಾಟ್ರಸ್‌ಗೆ ಕರೆದೊಯ್ದು ಮತ್ತು ಬರುವ ದ್ರವ್ಯ ನೀಡಿ ದುಷ್ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬಾಲಕಿಯ…

Read More

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ: 21 ಲಕ್ಷದ ಚಿನ್ನಾಭರಣ ಕಳ್ಳತನ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದ ವಿಚಿತ್ರ ಕಳ್ಳತನ ಪ್ರಕರಣವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಿಯಕರನ ಜೊತೆ ಓಡಿಹೋಗಲು ಪ್ಲ್ಯಾನ್ ಮಾಡಿದ್ದ ಪತ್ನಿಯೊಬ್ಬಳು ಗಂಡನ ಮನೆಯಲ್ಲೇ 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಬಂಧಿತರನ್ನು ಹಣಮಂತ ಮಾರಾಪೂರ ಹಾಗೂ ಹಸೀನಾ ನದಾಫ್ ಎಂದು ಗುರುತಿಸಲಾಗಿದೆ. ಹಸೀನಾ ಮದುವೆಯಾದ ಬಳಿಕವೂ ತನ್ನ ಪ್ರಿಯಕರನ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ. ಕೊನೆಗೆ ಪ್ರಿಯಕರನ ಜೊತೆ ಜೀವನ ಸಾಗಿಸಲು ನಿರ್ಧರಿಸಿದ್ದ ಆಕೆ ಗಂಡನ ಮನೆಯಲ್ಲಿದ್ದ 154.6…

Read More