ಬೆಂಗಳೂರಿನಲ್ಲಿ ಶಾಕ್ ಘಟನೆ: ರಕ್ಷಕರಂತೆ ನಟಿಸಿ ಮಹಿಳೆ ಕೊಲೆ ಮಾಡಿದ ಕಿರಾತಕರು
ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತಹ ಸಿನಿಮೀಯ ಕ್ರೈಂ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ ಒಂಟಿ ಮಹಿಳೆಯನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಪ್ರಕರಣವನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇದಿಸಿದ್ದಾರೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಕೇಶ್ ಎಂಬಾತ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ಸಂಭವಿಸಿದ ತಕ್ಷಣವೇ ಇತರ ಆರೋಪಿಗಳು ಸ್ಥಳಕ್ಕೆ ಬಂದು ರಕ್ಷಕರಂತೆ ನಟಿಸಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ…

