ಬೇಸಿಗೆಯ ಹೊಡೆತಕ್ಕೆ ಕೇರಳ ಕಂಗಾಲು: ಹಾವು ಕಡಿತದಿಂದ ಸರಣಿ ಸಾವು

ಕೇರಳ ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ಕಳೆದ 10 ದಿನಗಳಲ್ಲಿ 60ಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಿರುವನಂತಪುರಂ, ತ್ರಿಶೂರ್, ಆಲಪ್ಪುಝಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾವುಗಳು ತಣ್ಣನೆಯ ಸ್ಥಳಗಳ ಹುಡುಕಾಟದಲ್ಲಿ ಮನೆಗಳ ಒಳಗೆ ನುಗ್ಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಬೆಡ್, ಬಾತ್‌ರೂಮ್, ದಿಂಬುಗಳ ಅಡಿಯಲ್ಲಿ ಹಾವುಗಳು ಸಿಕ್ಕಿರುವ ಘಟನೆಗಳು…

Read More

ನರ್ಸಿಂಗ್ ವಿದ್ಯಾರ್ಥಿ ಸಾವು: ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ ತೀವ್ರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಖಾಸಗಿ BTL ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ಕೇರಳ ಮೂಲದ 19 ವರ್ಷದ ವಿದ್ಯಾರ್ಥಿ ಆದಿತ್ಯ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಎರಡನೇ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಹಪಾಠಿಗಳು ಈ ಘಟನೆ ಕಂಡು ತಕ್ಷಣ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಮೃತನ ತಂದೆ ಪ್ರದೀಪ್ ಅವರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಮಗನಿಗೆ…

Read More

ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ಪ್ರಕಾರ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಆದರೆ ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ. ಇದೇ ವೇಳೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಬಯಲಾಗಿದೆ….

Read More

ತುಮಕೂರಿನಲ್ಲಿ ಹಕ್ಕಿ ಜ್ವರ ಆತಂಕ: ನವಿಲುಗಳ ಸಾವಿಗೆ H5N1 ಸೋಂಕು ದೃಢ – 33 ಹಳ್ಳಿಗಳಲ್ಲಿ ಹೈ ಅಲರ್ಟ್

ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವಿಗೆ ಸಂಬಂಧಿಸಿದಂತೆ ಆತಂಕಕಾರಿ ಮಾಹಿತಿ ಹೊರಬಂದಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳು ನಿಗೂಢವಾಗಿ ಸಾಯುತ್ತಿದ್ದ ಘಟನೆಗೆ ಈಗ ಅಧಿಕೃತ ಸ್ಪಷ್ಟನೆ ಸಿಕ್ಕಿದೆ. FSL (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಪ್ರಕಾರ, ಮೃತಪಟ್ಟ ನವಿಲುಗಳಲ್ಲಿ H5N1 ಹಕ್ಕಿ ಜ್ವರ ವೈರಸ್ ಇರುವುದನ್ನು ದೃಢಪಡಿಸಲಾಗಿದೆ. ಏಪ್ರಿಲ್ 16ರಿಂದ ಆರಂಭವಾದ ಈ ಘಟನೆಗಳಲ್ಲಿ ಕೇವಲ 11 ದಿನಗಳಲ್ಲಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಬಿಸಿಲಿನ ತಾಪಮಾನ ಮತ್ತು ನಿರ್ಜಲೀಕರಣವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ನಂತರ…

Read More

ಭಾರೀ ಮಳೆಗೆ ಮೆಟ್ರೋ ಮೊರೆ ಹೋದ ಬೆಂಗಳೂರಿಗರು: ‘ನಮ್ಮ ಮೆಟ್ರೋ’ದಲ್ಲಿ ಹೊಸ ದಾಖಲೆ

ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ರಸ್ತೆಗಳೆಲ್ಲಾ ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಇದೇ ವೇಳೆ Ola ಹಾಗೂ Uber ಸೇವೆಗಳಲ್ಲೂ ಬುಕಿಂಗ್ ಸಮಸ್ಯೆಗಳು ಎದುರಾದ ಹಿನ್ನೆಲೆ, ಸಾವಿರಾರು ಜನ ನಮ್ಮ ಮೆಟ್ರೋ ಮೊರೆ ಹೋದರು. ಈ ಪರಿಣಾಮ ಏಪ್ರಿಲ್ 29ರಂದು ನಮ್ಮ ಮೆಟ್ರೋ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದ್ದು, ಒಂದೇ ದಿನ 12 ಲಕ್ಷ 85 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ…

Read More

‘ಧುರಂಧರ್ 2’ ಕತೆ ಕದ್ದ ಆರೋಪ | ಆದಿತ್ಯ ಧರ್ ವಿರುದ್ಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿ ರೂಪಾಯಿ ದಾಟಿದೆ. ಆದರೆ ಇದೇ ಸಮಯದಲ್ಲಿ ಸಿನಿಮಾ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಕೇಳಿಬಂದಿದೆ. ಕರ್ನಾಟಕದ ಸಂತೋಶ್ ಕುಮಾರ್ ಎಂಬುವರು, ‘ಡಿ ಸಾಹೇಬ್’ ಹೆಸರಿನ ಕಥೆಯನ್ನು ತಾವು ಈಗಾಗಲೇ ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿದ್ದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ‘ಧುರಂಧರ್ 2’ ಸಿನಿಮಾ ತಮ್ಮ ಕಥೆಯನ್ನು…

Read More

ಬೆಂಗಳೂರಿನಲ್ಲಿ ಲಿವಿನ್ ರಿಲೇಷನ್‌ಶಿಪ್ ದುರಂತ – ಅನುಮಾನಕ್ಕೆ ಯುವತಿ ನೇಣು

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿಯ ಜಗಳ ದುರಂತ ಅಂತ್ಯ ಕಂಡ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ನಡೆದಿದೆ. ಮೇಘಾಲಯ ಮೂಲದ 34 ವರ್ಷದ ಅಗತ ಬೈತಿಯಂಗುಂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅಗತ ಬೈತಿಯಂಗುಂ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ಮಣಿಪುರ ಮೂಲದ ನವಾಜ್ ಶರೀಫ್ (26) ಜೊತೆ ಕಳೆದ ಮೂರು ವರ್ಷಗಳಿಂದ ಲಿವಿನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇಬ್ಬರ ನಡುವೆ 8 ವರ್ಷಗಳ ವಯಸ್ಸಿನ ಅಂತರವಿದ್ದು,…

Read More

ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದ ಚಂದ್ರೇಗೌಡ ಎಂಬಾತ ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಆರೋಪಿ ಮಹಿಳೆಯರ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಸಂಗ್ರಹಿಸಿಕೊಂಡು, ಅವುಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್ ಅಧಿಕಾರಿ, ವಕೀಲ ಹಾಗೂ ಮಾಧ್ಯಮ ಪ್ರತಿನಿಧಿ ಎಂದು ನಕಲಿ ಪರಿಚಯ ನೀಡಿ ಮಹಿಳೆಯರನ್ನು ಮೋಸಗೊಳಿಸುತ್ತಿದ್ದ ಎನ್ನಲಾಗಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬಳಿಗೆ “ನಿನ್ನನ್ನು ಮದುವೆಯಾಗುತ್ತೇನೆ” ಎಂದು…

Read More

ಬಿರುಗಾಳಿ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ಪರಿಹಾರಕ್ಕೆ ರೈತರ ಒತ್ತಾಯ

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಅಕಾಲಿಕ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಸಾವಿರಾರು ಬಾಳೆ ಗಿಡಗಳು ನೆಲಕಚ್ಚಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಲೋಕೇಶ್, ಪರಮೇಶ್ ಹಾಗೂ ನಾಗರಾಜ್ ಅವರಿಗೆ ಸೇರಿದ ಬಾಳೆ ತೋಟಗಳು ಸಂಪೂರ್ಣ ಹಾನಿಗೊಳಗಾಗಿವೆ. ಇನ್ನೂ ಒಂದು ತಿಂಗಳಲ್ಲಿ ಕಟಾವು ಮಾಡಬೇಕಿದ್ದ ಬಾಳೆಗೊನೆಗಳು ಮಳೆ ಮತ್ತು ಗಾಳಿಯ ಅಬ್ಬರಕ್ಕೆ ಮುರಿದು ಬಿದ್ದಿವೆ. ಇದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದೇ…

Read More

ವಾಣಿಜ್ಯ LPG ಸಿಲಿಂಡರ್ ಬೆಲೆ ಭಾರೀ ಏರಿಕೆ – ಬೆಂಗಳೂರಿನಲ್ಲಿ ₹3,152ಕ್ಕೆ ಏರಿದ ದರ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1ರಿಂದ ಹೊಸ ದರ ಜಾರಿಗೆ ಬಂದಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ ₹3,071.50ಕ್ಕೆ ಏರಿಕೆಯಾಗಿದೆ. ಬೆಂಗಳೂರುದಲ್ಲೂ ವಾಣಿಜ್ಯ ಗ್ಯಾಸ್ ದರದಲ್ಲಿ ₹991 ಏರಿಕೆಯಾಗಿದ್ದು, ಇಂದಿನಿಂದ ಒಂದು ಸಿಲಿಂಡರ್ ಬೆಲೆ ₹3,152 ಆಗಿದೆ. ಆದರೆ ಗೃಹ ಬಳಕೆಯ 14.2 ಕೆಜಿ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಜಾಗತಿಕ ಇಂಧನ ದರ ಏರಿಕೆ…

Read More