ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ – ಇಬ್ಬರು ಇಂಜಿನಿಯರ್ ಅಮಾನತು, ಡಿಸಿ ನೇತೃತ್ವದಲ್ಲಿ ತನಿಖೆ
ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್.ಟಿ ರುದ್ರಮುನಿ ಹಾಗೂ ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ವಿರುದ್ಧ ಕ್ರಮ ಜರುಗಿದೆ. ಘಟನೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತನಿಖಾ ಸಮಿತಿಯಲ್ಲಿ ತಹಶೀಲ್ದಾರ್, ಪಿಡಬ್ಲ್ಯೂಡಿ ನಿವೃತ್ತ…

