ಬೆಂಗಳೂರು ಚಿನ್ನ ವಂಚನೆ ಹಗರಣ: ಜ್ಯುವೆಲರಿ ಮಾಲೀಕ ಪರಾರಿ

ಬೆಂಗಳೂರು ನಗರದಲ್ಲಿ ದೊಡ್ಡ ಮಟ್ಟದ ಚಿನ್ನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕಡಿಮೆ ಬಡ್ಡಿಯ ಆಮಿಷ ನೀಡಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಕೋಟ್ಯಂತರ ರೂ. ವಂಚಿಸಿದ ಜ್ಯುವೆಲರಿ ಶಾಪ್ ಮಾಲೀಕ ತೇಜಸ್ ಗೌಡ ಪರಾರಿಯಾಗಿದ್ದಾನೆ. ರಾಘವೇಂದ್ರ ಜ್ಯುವೆಲರಿ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ವ್ಯಕ್ತಿ, ಗ್ರಾಹಕರಿಂದ ಚಿನ್ನ ಬಿಡಿಸಿ ತನ್ನ ಅಂಗಡಿಯಲ್ಲಿ ಇಟ್ಟುಕೊಂಡು ನಂತರ ಶಾಪ್ ಮುಚ್ಚಿ ನಾಪತ್ತೆಯಾಗಿದ್ದಾನೆ. ಮಹಿಳೆಯೊಬ್ಬರು ನೀಡಿದ ದೂರು ಆಧಾರವಾಗಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ಆರೋಪಿ ಶೋಧ ಕಾರ್ಯ ಮುಂದುವರೆಸಿದ್ದಾರೆ….

Read More

ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ ಕೇಸ್ – ವೃದ್ಧೆಗೆ ಡಿಕ್ಕಿ ಹೊಡೆದು ಹಣ ದೋಚಲು ಪ್ಲಾನ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತ ಪ್ರಕರಣೊಂದು ಬೆಳಕಿಗೆ ಬಂದಿದೆ. ಸಾಲ ಪಡೆದಿದ್ದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೇ, ವೃದ್ಧೆಯನ್ನೇ ಉದ್ದೇಶಪೂರ್ವಕವಾಗಿ ಅಪಘಾತಕ್ಕೊಳಪಡಿಸಿ ಕೊಲೆ ಮಾಡಿರುವ ಶಾಕಿಂಗ್ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಒಂಟಿ ಮಹಿಳೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಚೇತನ್ ಆಕೆಯಿಂದ ಹಣ ಸಾಲ ಪಡೆದಿದ್ದ. ಆದರೆ ಹಣ ಮರಳಿಸಲು ಆಗದೇ, ವಿಜಯಲಕ್ಷ್ಮಿ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ. ಪ್ಲಾನ್ ಪ್ರಕಾರ ರಾಕೇಶ್ ಬೈಕ್‌ನಿಂದ ವಿಜಯಲಕ್ಷ್ಮಿಗೆ ಡಿಕ್ಕಿ…

Read More

ಬೆಂಗಳೂರಿನಲ್ಲಿ ಶಾಕ್ ಘಟನೆ: ರಕ್ಷಕರಂತೆ ನಟಿಸಿ ಮಹಿಳೆ ಕೊಲೆ ಮಾಡಿದ ಕಿರಾತಕರು

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತಹ ಸಿನಿಮೀಯ ಕ್ರೈಂ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ ಒಂಟಿ ಮಹಿಳೆಯನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಪ್ರಕರಣವನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇದಿಸಿದ್ದಾರೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಕೇಶ್ ಎಂಬಾತ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ಸಂಭವಿಸಿದ ತಕ್ಷಣವೇ ಇತರ ಆರೋಪಿಗಳು ಸ್ಥಳಕ್ಕೆ ಬಂದು ರಕ್ಷಕರಂತೆ ನಟಿಸಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ…

Read More

ಅಕ್ರಮ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ವಸೂಲಿ ಆರೋಪ: ಬಳ್ಳಾರಿ ಎಸ್ಪಿ ಗನ್‌ಮ್ಯಾನ್ ಅಂದರ್

ಬಳ್ಳಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಜಿಲ್ಲೆಯ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್‌ಮ್ಯಾನ್ ದೇವರಾಜ್‌ರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಮಡಕೇರಿಯಿಂದ ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಆರೋಪಿಗಳು ಅಡ್ಡಗಟ್ಟಿದ್ದರು ಎನ್ನಲಾಗಿದೆ. ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿಕೊಂಡು ಮೊದಲಿಗೆ ಐದು ಲಕ್ಷ…

Read More

ಅಪ್ರಾಪ್ತ ಹಿಂದೂ ಬಾಲಕಿ ಜೊತೆ ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಯುವಕ – ಪ್ರಶ್ನಿಸಿದ 8 ಭಜರಂಗದಳ ಕಾರ್ಯಕರ್ತರ ಬಂಧನ

ಕೊಪ್ಪಳದಲ್ಲಿ ಮತ್ತೊಮ್ಮೆ ಲವ್ ಜಿಹಾದ್ ಶಂಕೆ ಮೂಡಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಹಿಂದೂ ಬಾಲಕಿ ಹಾಗೂ ಮುಸ್ಲಿಂ ಯುವಕ ಸಿಕ್ಕಿಬಿದ್ದ ಘಟನೆ ಇದೀಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಕೊಪ್ಪಳ ನಗರದ ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಸಮೀರ್ ಎಂಬ ಮುಸ್ಲಿಂ ಯುವಕ ಇದ್ದಾನೆ ಎಂಬ ಮಾಹಿತಿ ತಿಳಿದ ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರಶ್ನಿಸಿದ್ದಾರೆ. ಈ ವೇಳೆ ಯುವಕ ಮತ್ತು ಕಾರ್ಯಕರ್ತರ ನಡುವೆ ಮಾತಿನ…

Read More

ಹೊಸಪೇಟೆ ಮದುವೆ ಮಂಟಪದಲ್ಲಿ ಬಂಗಾರ-ಬೆಳ್ಳಿ ಕಳ್ಳತನ: CCTVನಲ್ಲಿ ಕಳ್ಳನ ಎಸ್ಕೇಪ್ ದೃಶ್ಯ ಸೆರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೆಚ್ಚಿಬೀಳಿಸುವ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮಧ್ಯೆಯೇ ಕಳ್ಳನೊಬ್ಬ ವಧುವಿಗೆ ಹಾಕಬೇಕಿದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳಿದ್ದ ಬ್ಯಾಗ್ ಕದ್ದೊಯ್ದಿದ್ದಾನೆ. ಮೇ 4ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಕಳ್ಳ ಬ್ಯಾಗ್ ಸಮೇತ ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳತನಗೊಂಡ ವಸ್ತುಗಳಲ್ಲಿ 40 ಗ್ರಾಂ ಚಿನ್ನದ ಸರ, ಅರ್ಧ ಕೆಜಿ ಬೆಳ್ಳಿ, 10 ಸಾವಿರ…

Read More

ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ನಾಲ್ಕು ಜಿಲ್ಲೆಗಳಿಗೆ ನೀರಿನ ಆತಂಕ

ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ ಕೇವಲ 10 ಟಿಎಂಸಿ ನೀರು ಮಾತ್ರ ಉಳಿದಿದ್ದು, ಇದರಿಂದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದು ತುಂಗಭದ್ರಾ ಮಂಡಳಿಗೆ ದೊಡ್ಡ ಸವಾಲಾಗಿದೆ. ಮೇ ತಿಂಗಳ ತೀವ್ರ ಬಿಸಿಲಿನಿಂದ ನೀರಿನ ಆವಿಯಾಗುವಿಕೆ ಹೆಚ್ಚಾಗಿದ್ದು, ಜೂನ್ ತಿಂಗಳಲ್ಲಿ ಮಳೆ ಬೀಳುವವರೆಗೂ ಲಭ್ಯವಿರುವ ಅಲ್ಪ ಪ್ರಮಾಣದ ನೀರನ್ನೇ ಅತ್ಯಂತ ಜಾಗರೂಕತೆಯಿಂದ ಬಳಸಬೇಕಾದ…

Read More

ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಯಲು ಮೈಸೂರು ಪಾಲಿಕೆಯ ವಿನೂತನ ಪ್ರಯೋಗ

ಮೈಸೂರು ಪಾಲಿಕೆಯ ಹೊಸ ಪ್ರಯೋಗ: ಗೋಡೆ ಮುಂದೆ ಮೂತ್ರ ವಿಸರ್ಜನೆ ಮಾಡಿದರೆ ಎಲ್ಲರಿಗೂ ಕಾಣುತ್ತೆ! ಮೈಸೂರು, ಮೇ 6: ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ವಿನೂತನ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣಗಳ ಸಮೀಪ ಇರುವ ಕಾಂಪೌಂಡ್ ಗೋಡೆಗಳಿಗೆ ಸ್ಟೇನ್‌ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಿ, ಅದನ್ನು ಕನ್ನಡಿಯಂತೆ ಬಳಸುವ ಪ್ರಯೋಗ ಆರಂಭಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಗೋಡೆಯ ಮೇಲೆ ಈ ವಿಶೇಷ ಶೀಟ್‌ಗಳನ್ನು…

Read More

ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ: ಕದ್ದ ಮಾಂಗಲ್ಯ ಸರ 2 ದಿನಗಳ ಬಳಿಕ ಮನೆ ಮುಂದೆ ಪ್ರತ್ಯಕ್ಷ!

ಚಿಕ್ಕಬಳ್ಳಾಪುರದಲ್ಲಿ ಅಚ್ಚರಿಯ ಘಟನೆ ಒಂದು ನಡೆದಿದ್ದು, ಕಳುವಾಗಿದ್ದ ಮಹಿಳೆಯ ಮಾಂಗಲ್ಯ ಸರ ಎರಡು ದಿನಗಳ ಬಳಿಕ ಮತ್ತೆ ಅವರ ಮನೆ ಬಳಿಯೇ ಪತ್ತೆಯಾಗಿದೆ. ನಗರದ ವಾರ್ಡ್ ನಂಬರ್ 23ರ ಚಾಮರಾಜಪೇಟೆಯಲ್ಲಿ ಮೇ 3ರಂದು ಈ ಘಟನೆ ನಡೆದಿತ್ತು. ಮನೆಯ ಮುಂದೆ ನೀರಿನ ಸಂಪ್ ಪರಿಶೀಲಿಸುತ್ತಿದ್ದ ವೇಳೆ ಗೃಹಿಣಿ ಪ್ರಿಯಾ ಅವರ ಕುತ್ತಿಗೆಯಿಂದ ಇಬ್ಬರು ದುಷ್ಕರ್ಮಿಗಳು ಮಾಂಗಲ್ಯ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು. ಪಲ್ಸರ್ 220 ಬೈಕ್‌ನಲ್ಲಿ ಬಂದಿದ್ದ ಆರೋಪಿಗಳಲ್ಲಿ ಒಬ್ಬ ಬೈಕ್‌ನಿಂದ ಇಳಿದು ಸರ ಕಿತ್ತುಕೊಂಡಿದ್ದರೆ, ಮತ್ತೊಬ್ಬ…

Read More

LPG ಬಳಿಕ ಪೆಟ್ರೋಲ್ ಸಂಕಷ್ಟ: ಬೆಂಗಳೂರಿನಲ್ಲಿ ವಾಹನ ಸವಾರರ ಆಕ್ರೋಶ

ಬೆಂಗಳೂರು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. HP ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಇಂಧನ ದಾಸ್ತಾನು ಖಾಲಿಯಾಗಿದ್ದು, ವಾಹನ ಸವಾರರು ಬಂಕ್‌ಗಳ ಮುಂದೆ ಉದ್ದ ಸಾಲಿನಲ್ಲಿ ನಿಂತು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಬಂಕ್‌ಗಳಾದ ಶೆಲ್, ಜಿಯೋ ಮತ್ತು ನಯಾರಾ ಬಂಕ್‌ಗಳಲ್ಲಿ ಬೆಲೆ ಹೆಚ್ಚಾಗಿರುವುದರಿಂದ ಹೆಚ್ಚಿನ ಜನರು ಸರ್ಕಾರಿ ಸ್ವಾಮ್ಯದ ಬಂಕ್‌ಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಸಾರ್ವಜನಿಕ ಬಂಕ್‌ಗಳಲ್ಲಿ ಬೇಡಿಕೆ ಏರಿಕೆಯಾಗಿದ್ದು, ಡಿಪೋಗಳಿಂದ ಸರಿಯಾದ ಸಮಯಕ್ಕೆ ಇಂಧನ ಸರಬರಾಜು ಆಗುತ್ತಿಲ್ಲ…

Read More