ಬೈರತಿ ಬಸವರಾಜ್‌ಗೆ ಮತ್ತೊಂದು ಸಂಕಷ್ಟ: ಆಪ್ ನಾಯಕಿ ಕಾರು ಧ್ವಂಸ ಆರೋಪ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕಿ ಸತ್ಯವಾಣಿ ಅವರು ತಮ್ಮ ಕಾರನ್ನು ಶಾಸಕರ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಚುನಾವಣಾ ರಾಜಕೀಯದ ದ್ವೇಷದಿಂದ ತನ್ನ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಕಳೆದ ತಿಂಗಳು ತಮ್ಮ ವಿರುದ್ಧ ದೊಡ್ಡ ಮಟ್ಟದ ಫ್ಲೆಕ್ಸ್ ಅಭಿಯಾನ…

Read More

ಬೆಂಗಳೂರಿನಲ್ಲಿ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ: ಆಟೋ ಚಾಲಕ ಮೃತ

ಬೆಂಗಳೂರು: ಕ್ಷುಲ್ಲಕ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ. ಆಟೋ ಸೀಟ್ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮೃತನನ್ನು 26 ವರ್ಷದ ಮುಬಾರಕ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ತಬ್ರೇಜ್ (46) ಎಂದು ಪೊಲೀಸರು ತಿಳಿಸಿದ್ದಾರೆ. ಮೇ 1ರಂದು ಮುಬಾರಕ್ ತನ್ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ತಬ್ರೇಜ್ ಮೇಲೆ ಆರೋಪಿಸಿ ಜಗಳ ಆರಂಭಿಸಿದ್ದ ಎನ್ನಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆ…

Read More

ನಟ ಚೇತನ್ ದೂರಿನ ಮೇರೆಗೆ ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ನಟ ಚೇತನ್ ಅಹಿಂಸಾ ನೀಡಿದ ದೂರಿನ ಮೇರೆಗೆ ಸಿನಿಮಾ ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದು ಹಾಗೂ ಮನೆ ಮುಂದೆ ಗಲಾಟೆ ನಡೆಸಿದ ಆರೋಪದಡಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ.ರಾಜ್‌ಕುಮಾರ್ ಸಮಾಧಿ ಜಾಗದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಮಾಡಿದ್ದ ಪೋಸ್ಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಪೋಸ್ಟ್ ವಿರೋಧಿಸಿ ಕೆಲವರು ಚೇತನ್ ನಿವಾಸದ ಬಳಿ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಟ ಚೇತನ್…

Read More

ನರ್ಸಿಂಗ್ ವಿದ್ಯಾರ್ಥಿ ಸಾವು: ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ ತೀವ್ರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಖಾಸಗಿ BTL ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ಕೇರಳ ಮೂಲದ 19 ವರ್ಷದ ವಿದ್ಯಾರ್ಥಿ ಆದಿತ್ಯ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಎರಡನೇ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಹಪಾಠಿಗಳು ಈ ಘಟನೆ ಕಂಡು ತಕ್ಷಣ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಮೃತನ ತಂದೆ ಪ್ರದೀಪ್ ಅವರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಮಗನಿಗೆ…

Read More

ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ಪ್ರಕಾರ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಆದರೆ ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ. ಇದೇ ವೇಳೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಬಯಲಾಗಿದೆ….

Read More

ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದ ಚಂದ್ರೇಗೌಡ ಎಂಬಾತ ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಆರೋಪಿ ಮಹಿಳೆಯರ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಸಂಗ್ರಹಿಸಿಕೊಂಡು, ಅವುಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್ ಅಧಿಕಾರಿ, ವಕೀಲ ಹಾಗೂ ಮಾಧ್ಯಮ ಪ್ರತಿನಿಧಿ ಎಂದು ನಕಲಿ ಪರಿಚಯ ನೀಡಿ ಮಹಿಳೆಯರನ್ನು ಮೋಸಗೊಳಿಸುತ್ತಿದ್ದ ಎನ್ನಲಾಗಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬಳಿಗೆ “ನಿನ್ನನ್ನು ಮದುವೆಯಾಗುತ್ತೇನೆ” ಎಂದು…

Read More

ಬೆಂಗಳೂರಿನಲ್ಲಿ ಮತ್ತೆ ಕಳ್ಳರ ಅಟ್ಟಹಾಸ – ಗೋಡೆ ಕೊರೆದು ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಗ್ಯಾಂಗ್

ಬೆಂಗಳೂರು ನಗರದಲ್ಲಿ ಮತ್ತೆ ಕಳ್ಳರ ಅಟ್ಟಹಾಸ ಮೆರೆದಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಗಗನಕ್ಕೇರಿರುವ ನಡುವೆಯೇ, ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನ ಎಂಬಿ ಜ್ಯುವೆಲ್ಲರ್ಸ್‌ನಲ್ಲಿ ಭಾರೀ ಕಳ್ಳತನ ನಡೆದಿದೆ. ಸುಮಾರು 1 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಅತ್ಯಂತ ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದಾರೆ. ಮೊದಲು ಜ್ಯುವೆಲ್ಲರಿ ಅಂಗಡಿಯ ಹಿಂಭಾಗದ ಕೊಠಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ನಂತರ ಗೋಡೆಯನ್ನೇ ಕೊರೆದು ಅಂಗಡಿಯೊಳಗೆ…

Read More

ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ್ ಹತ್ಯೆ: ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ

Intro:ಗಂಗಾವತಿಯಿಂದ ಬಂದ ಬೆಚ್ಚಿಬೀಳಿಸುವ ತೀರ್ಪು… ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ನ್ಯಾಯಾಲಯ ಕೊಟ್ಟಿದೆ ಕಠಿಣ ಶಿಕ್ಷೆ… Main:ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ್ ಕುರುಬರ್ ಹತ್ಯೆ ಪ್ರಕರಣದಲ್ಲಿ ಆರು ಜನ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.ಗಂಗಾವತಿ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಈ ಮಹತ್ವದ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ರವಿ, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಂ ಮತ್ತು…

Read More

ಪ್ರೇಯಸಿಯ ಮೇಲೆ ಅತ್ಯಾಚಾರ ಮಾಡಿ ಹತ್ಯೆ: ಪ್ರಿಯಕರನಿಗೆ ಜೀವಾವಧಿ ಶಿಕ್ಷೆ | ಹಾಸನ ಕೋರ್ಟ್ ತೀರ್ಪು

ಹಾಸನದಲ್ಲಿ ನಡೆದಿದ್ದ ಭೀಕರ ಪ್ರೇಮ ಪ್ರಕರಣಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ಪ್ರೇಯಸಿಯನ್ನೇ ಅತ್ಯಾಚಾರಗೈದು ಬಳಿಕ ಹತ್ಯೆ ಮಾಡಿದ ಪ್ರಿಯಕರನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2018ರ ಏಪ್ರಿಲ್ 22ರಂದು ಹುಟ್ಟುಹಬ್ಬ ಆಚರಣೆ ಹೆಸರಿನಲ್ಲಿ ಪ್ರೇಯಸಿಯನ್ನು ಕರೆಸಿಕೊಂಡಿದ್ದ ಪ್ರವೀಣ್, ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದನು. ಈ ಘಟನೆ ಬೇಲೂರು ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ನಡೆದಿದೆ. ಪ್ರಕರಣವನ್ನು ದಾಖಲಿಸಿಕೊಂಡ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ…

Read More

AI ಡೀಪ್‌ಫೇಕ್ ಬಳಸಿ ಆಧಾರ್ ಹ್ಯಾಕ್ – OTP ಇಲ್ಲದೇ ಬ್ಯಾಂಕ್ ಖಾತೆ ತೆರೆಯುವ ವಂಚನೆ

ಹೆಡ್ಲೈನ್:ಒಟಿಪಿ ಬರಲ್ಲ ಆದ್ರೂ ಬ್ಯಾಂಕ್ ಖಾತೆ ಓಪನ್! AI-ಡೀಪ್‌ಫೇಕ್ ಮೂಲಕ ಆಧಾರ್ ಬೈಪಾಸ್ – ಹೈಟೆಕ್ ಗ್ಯಾಂಗ್ ಅರೆಸ್ಟ್ ಸಬ್‌ಹೆಡ್ಲೈನ್:ಗೂಗಲ್ ಜೆಮಿನಿ ಬಳಸಿ ನಕಲಿ ವಿಡಿಯೋ, ಮೊಬೈಲ್ ಸಂಖ್ಯೆ ಬದಲಾವಣೆ – ಲಕ್ಷಾಂತರ ಸಾಲ ವಂಚನೆ ಬಾಡಿ: ಅಹಮದಾಬಾದ್: ಸೈಬರ್ ವಂಚಕರು ದಿನದಿಂದ ದಿನಕ್ಕೆ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ಇತ್ತೀಚೆಗೆ ಬೆಳಕಿಗೆ ಬಂದಿರುವ ಪ್ರಕರಣವೊಂದರಲ್ಲಿ, ಸಂತ್ರಸ್ತರಿಗೆ ಒಟಿಪಿ (OTP) ಬಾರದಂತೆ ತಡೆದು, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಸಾಲ ಪಡೆದಿರುವ ಶಾಕ್‌ಿಂಗ್‌ ಸಂಗತಿ ಬಹಿರಂಗವಾಗಿದೆ. ಈ…

Read More