ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ವಿದ್ಯಾರ್ಥಿನಿಯರ ಮೇಲೆ ಅಚ್ಚರಿಯ ಘಟನೆ ನಡೆದಿದೆ.

ಸಿಇಟಿ ಪರೀಕ್ಷೆ (CET Exam) ವೇಳೆ ಬೆಳಗಾವಿ ಸೇರಿದಂತೆ ಹಲವಾರು ಪರೀಕ್ಷಾ ಕೇಂದ್ರಗಳಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರ ತೀವ್ರ ತಪಾಸಣೆ ನಡೆಸಿದ ಸಿಬ್ಬಂದಿ, ಕೆಲ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಿರುವುದು ಆಘಾತಕ್ಕೆ ಕಾರಣವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಾರಿ ಮೊದಲ ಬಾರಿಗೆ ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದು, ಅದರ ಭಾಗವಾಗಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರದ ಗೇಟ್ ಬಳಿ ವಿದ್ಯಾರ್ಥಿಗಳ ತಪಾಸಣೆ ತೀವ್ರವಾಗಿ ನಡೆಯುತ್ತಿದ್ದು, ಕೆಲವೆಡೆ ಈ ರೀತಿಯ ವಿಚಿತ್ರ ಕ್ರಮಗಳು ಪಾಲನೆಯಾಗಿರುವುದು ವಿದ್ಯಾರ್ಥಿಗಳಲ್ಲಿ ಅಸಮಾಧಾನಕ್ಕೂ ಕಾರಣವಾಗಿದೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, “ಇದು ಅತಿಯಾದ ನಿಯಮವೇ?” ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಈ ಬಗ್ಗೆ KEA ಅಥವಾ ಸಂಬಂಧಿತ ಅಧಿಕಾರಿಗಳ ಅಧಿಕೃತ ಸ್ಪಷ್ಟನೆ ಇನ್ನೂ ನಿರೀಕ್ಷೆಯಲ್ಲಿದೆ.

Leave a Reply

Your email address will not be published. Required fields are marked *