ಉಪಚುನಾವಣೆ ಫಲಿತಾಂಶ: ಸಮರ್ಥ್ ಶಾಮನೂರು ಗೆದ್ದು ಬೀಗಿದರು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರ ಮೊಮ್ಮಗ ಸಮರ್ಥ್ ಶಾಮನೂರು ಗೆಲುವಿನ ನಗು ಹೊತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿರುವ ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ರಾಜ್ಯದ ಇನ್ನೊಂದು ಕ್ಷೇತ್ರದಲ್ಲಿಯೂ ಬಿಜೆಪಿ ಹಿನ್ನಡೆ ಕಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಇದು ಮಹತ್ವದ ರಾಜಕೀಯ ಗೆಲುವಾಗಿ ಪರಿಣಮಿಸಿದೆ.

Leave a Reply

Your email address will not be published. Required fields are marked *