
ಕೇರಳ ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ಕಳೆದ 10 ದಿನಗಳಲ್ಲಿ 60ಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಿರುವನಂತಪುರಂ, ತ್ರಿಶೂರ್, ಆಲಪ್ಪುಝಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭೀತಿಯನ್ನು ಉಂಟುಮಾಡಿದೆ.
ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾವುಗಳು ತಣ್ಣನೆಯ ಸ್ಥಳಗಳ ಹುಡುಕಾಟದಲ್ಲಿ ಮನೆಗಳ ಒಳಗೆ ನುಗ್ಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಬೆಡ್, ಬಾತ್‌ರೂಮ್, ದಿಂಬುಗಳ ಅಡಿಯಲ್ಲಿ ಹಾವುಗಳು ಸಿಕ್ಕಿರುವ ಘಟನೆಗಳು ವರದಿಯಾಗಿವೆ.

