ಹಿರೇಬಾಗೇವಾಡಿಯಲ್ಲಿ ಆತಂಕ: ದುಷ್ಕರ್ಮಿಗಳ ದಾಳಿ, ಪೊಲೀಸರ ವಿರುದ್ಧ ಆರೋಪ

ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿ 15 ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಗಂಭೀರತೆ ಇದ್ದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದೇ ವೇಳೆ, ತಡರಾತ್ರಿ ದುಷ್ಕರ್ಮಿಗಳು ಸಾಂಬ್ರೆಕರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಭಯ ಹುಟ್ಟಿಸಿದೆ. ಮನೆಯಲ್ಲಿದ್ದ ಕುಟುಂಬ ಸದಸ್ಯರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೇವಲ ಕಾಟಾಚಾರಕ್ಕೆ ಪರಿಶೀಲನೆ ನಡೆಸಿ ಹಿಂತಿರುಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೂಕ್ತ ರಕ್ಷಣೆ ನೀಡದೇ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ ಎಂಬ ಟೀಕೆ ಕೇಳಿಬಂದಿದೆ.

ಪ್ರಸ್ತುತ ಜೀವ ಭಯದಲ್ಲಿ ದಿನ ದೂಡುತ್ತಿರುವ ಸಾಂಬ್ರೆಕರ್ ಕುಟುಂಬ, “ನಮಗೆ ರಕ್ಷಣೆ ನೀಡಿ, ನ್ಯಾಯ ಒದಗಿಸಿ” ಎಂದು ಕಣ್ಣೀರಿಟ್ಟಿದೆ. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *