ಕಾವೇರಿ ನದಿಯಲ್ಲಿ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮೇಕೆದಾಟು ಬಳಿ ಮಹಿಳೆಗೆ ಗಾಯ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ.

ಕಾವೇರಿ ನದಿ ಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ.

ಮೇಕೆದಾಟು ಸಮೀಪದ ಸಂಗಮ ಅರಣ್ಯ ಪ್ರದೇಶಕ್ಕೆ ನೀರು ಕುಡಿಯಲು ಬಂದಿದ್ದ ಕಾಡಾನೆ, ಏಕಾಏಕಿ ಅಲ್ಲಿದ್ದ ಪ್ರವಾಸಿಗರ ಮೇಲೆ ಎರಗಿದೆ. ಘಟನೆ ನೋಡಿದ ಪ್ರವಾಸಿಗರು ಭಯದಿಂದ ಎದ್ನೋಬಿದ್ನೋ ಓಡಿಹೋಗಿದ್ದಾರೆ.

ಈ ಗದ್ದಲದ ನಡುವೆ ಒಬ್ಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಪೂರ್ಣ ಘಟನೆ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಪ್ರವಾಸಿಗರು ಅರಣ್ಯ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *