ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ಪ್ರಕಾರ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಆದರೆ ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ.

ಇದೇ ವೇಳೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಬಯಲಾಗಿದೆ. ಈ ಘಟನೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಆರೋಗ್ಯ ಸೇವೆಗಳ ಜಾಲದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಹಿಂದೆಯೂ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಗಳಿಂದ ಸುದ್ದಿಯಾದ ಮಂಡ್ಯ ಜಿಲ್ಲೆ ಈಗ ಮತ್ತೆ ಗಮನ ಸೆಳೆದಿದೆ.

Leave a Reply

Your email address will not be published. Required fields are marked *