ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ರಿಷಬ್ ಶೆಟ್ಟಿ ಮತ್ತು ಆಶಿಕಾ ರಂಗನಾಥ್‌ಗೆ ‘ಅತ್ಯುತ್ತಮ ನಟ-ನಟಿ’ ಪ್ರಶಸ್ತಿ!
ಕನ್ನಡ ಚಿತ್ರರಂಗದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (CFCA) ಸಮಾರಂಭವು ಈ ಬಾರಿ ಬೆಂಗಳೂರಿನಲ್ಲಿ ಅತ್ಯಂತ ವೈಭವೋಪೇತವಾಗಿ ನೆರವೇರಿದೆ. 2025ನೇ ಸಾಲಿನಲ್ಲಿ ತೆರೆಕಂಡ ಚಿತ್ರಗಳ ಆಧಾರದ ಮೇಲೆ ನೀಡಲಾದ ಈ 7ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಯಾಂಡಲ್‌ವುಡ್‌ನ ದಿಗ್ಗಜರು ಮತ್ತು ಯುವ ಪ್ರತಿಭೆಗಳು ಪಾಲ್ಗೊಂಡಿದ್ದರು. ಈ ಬಾರಿಯ ಪ್ರಶಸ್ತಿ ಸಮಾರಂಭದಲ್ಲಿ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಅಮೋಘ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು…

