PGCET 2026 ಅರ್ಜಿ ಗಡುವು ಏ.30ರವರೆಗೆ ವಿಸ್ತರಣೆ – KEA ಮಹತ್ವದ ಘೋಷಣೆ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ನಡೆಯುವ PGCET 2026 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇರುವ ಗಡುವನ್ನು ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.

ಈ ಬಗ್ಗೆ KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಮೇ 5 ಕೊನೆಯ ದಿನವಾಗಿರುತ್ತದೆ. ಆದರೆ, ಈ ಬಾರಿ ಮತ್ತೆ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು KEA ಸ್ಪಷ್ಟಪಡಿಸಿದೆ.

ಆದ್ದರಿಂದ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಶುಲ್ಕವನ್ನು ಪಾವತಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *