
ಹಾಸನದಲ್ಲಿ ನಡೆದಿದ್ದ ಭೀಕರ ಪ್ರೇಮ ಪ್ರಕರಣಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ಪ್ರೇಯಸಿಯನ್ನೇ ಅತ್ಯಾಚಾರಗೈದು ಬಳಿಕ ಹತ್ಯೆ ಮಾಡಿದ ಪ್ರಿಯಕರನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2018ರ ಏಪ್ರಿಲ್ 22ರಂದು ಹುಟ್ಟುಹಬ್ಬ ಆಚರಣೆ ಹೆಸರಿನಲ್ಲಿ ಪ್ರೇಯಸಿಯನ್ನು ಕರೆಸಿಕೊಂಡಿದ್ದ ಪ್ರವೀಣ್, ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದನು. ಈ ಘಟನೆ ಬೇಲೂರು ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ನಡೆದಿದೆ.
ಪ್ರಕರಣವನ್ನು ದಾಖಲಿಸಿಕೊಂಡ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹಾಸನದ 3ನೇ ಅಧಿಕ ಸೆಷನ್ಸ್ ಕೋರ್ಟ್, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇದಲ್ಲದೆ ಸಾಕ್ಷಿ ನಾಶ ಮಾಡಿದ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ನೀಡಲಾಗಿದೆ.
ಈ ತೀರ್ಪು ಸಮಾಜದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಕಟ್ಟುನಿಟ್ಟಿನ ಸಂದೇಶ ನೀಡಿದೆ.

