
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಅರಗಿನಮರ ಕ್ಯಾಂಪ್ ನಿವಾಸಿ 17 ವರ್ಷದ ಭೂಮಿಕಾ ಎಂದು ಗುರುತಿಸಲಾಗಿದೆ.
ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಸಿಂಧನೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

