ಶೃಂಗೇರಿ ಪೋಸ್ಟಲ್ ಬ್ಯಾಲೆಟ್ ವಿವಾದ – ಜೀವರಾಜ್ ಸೇರಿ ಮೂವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದಡಿ ಶಾಸಕ ಡಿಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಂಚೆ ಮತ ಎಣಿಕೆ ಟೇಬಲ್‌ನ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ದೂರುದಲ್ಲಿ ಶಾಸಕ ಡಿಎನ್ ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಹೆಸರು ಉಲ್ಲೇಖಿಸಲಾಗಿದೆ.

ಸ್ಟ್ರಾಂಗ್ ರೂಂ ಸರಿಯಾಗಿ ಸೀಲ್ ಮಾಡಲಾಗಿರಲಿಲ್ಲ. ಮತಪತ್ರಗಳಿದ್ದ ಟ್ರಂಕ್ ತೆರೆದ ಸ್ಥಿತಿಯಲ್ಲಿ ಕಂಡುಬಂದಿತ್ತು. ಟ್ರಂಕಿನ ಲಾಕ್ ಕಟ್ ಆಗಿದ್ದು, ಸೀಲ್ ಓಪನ್ ಆಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರಿಂದ ಅಂಚೆ ಮತಗಳಲ್ಲಿ ಟ್ಯಾಂಪರಿಂಗ್ ನಡೆದಿರುವ ಅನುಮಾನ ವ್ಯಕ್ತಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವಂಚನೆ, ಕ್ರಿಮಿನಲ್ ಕಾನ್ಸ್‌ಪಿರಸಿ ಹಾಗೂ ಫೋರ್ಜರಿ ಆರೋಪಗಳಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *