
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಜಯಭೇರಿ ಬಾರಿಸಿದ್ದಾರೆ.
ಅಂಚೆ ಮತಗಳ ಎಣಿಕೆ ಕುರಿತ ಗೊಂದಲ ಹಾಗೂ ಆಕ್ಷೇಪಣೆಗಳ ಹಿನ್ನೆಲೆ ಮರು ಎಣಿಕೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು. ಮರು ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಸ್ಪಷ್ಟ ಮುನ್ನಡೆ ದೊರೆತಿದ್ದು, ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ.
ಈ ಕುರಿತು ಚುನಾವಣಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದು, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ದಾರೆ.
ಇದೀಗ ಶೃಂಗೇರಿ ಕ್ಷೇತ್ರದ ಈ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

