
ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ವೆಂಟಿಲೇಟರ್‌ನಲ್ಲಿ ಇತರ ಅಂಗಾಂಗಗಳು ಸ್ಥಿರವಾಗಿದ್ದರೂ ಮೆದುಳು ಪ್ರತಿಕ್ರಿಯೆ ನೀಡುತ್ತಿಲ್ಲ. ನಾಳೆ ಸಿಟಿ ಸ್ಕ್ಯಾನ್ ನಂತರ ವೈದ್ಯರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ತಿಳಿಸಿದ್ದಾರೆ.
ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗೂ ಸ್ಪಂದನೆ ಸಿಗದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

