ಕರ್ನಾಟಕದಲ್ಲಿ ಉರಿಯುತ್ತಿರುವ ಬಿಸಿಲು: ಕೋಳಿಗಳ ಸಾವು, ಕೆರೆಯಲ್ಲಿ ಮೀನುಗಳ ಮಾರಣಹೋಮ!
ಕರ್ನಾಟಕದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಕ್ಕುಟೋದ್ಯಮ, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಕೋಳಿಗಳ ಸಾವು ಹಾಗೂ ಕೆರೆಗಳಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

