ಸೇಡು ತೀರಿಸಿಕೊಳ್ಳಲು ಮತ್ತೆ ಅದೇ ಬಾಲಕಿ ಮೇಲೆ ಅತ್ಯಾಚಾರ: ಜೈಲಿನಿಂದ ಬಂದ ಆರೋಪಿ ಮತ್ತೆ ಅರೆಸ್ಟ್ | ಗದಗ ಸುದ್ದಿ
ಗದಗ: ಜೈಲಿನಿಂದ ಹೊರಬಂದ ಬಳಿಕ ಸೇಡು ತೀರಿಸಿಕೊಳ್ಳಲು ಅದೇ ಬಾಲಕಿ ಮೇಲೆ ಮತ್ತೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷ 5 ತಿಂಗಳ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪ ಅಲ್ಲಾಭಕ್ಷಿ ಕೊಪ್ಪದ ಎಂಬಾತನ ಮೇಲಿದೆ. ಈ ಕೃತ್ಯಕ್ಕೆ ಆತನ ಸ್ನೇಹಿತ ಆಸೀಫ್ ನದಫ್ ಸಹಕಾರ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಮೇ 23ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಂಪ್ಯೂಟರ್ ಕ್ಲಾಸ್ಗೆ ತೆರಳುತ್ತಿದ್ದ ಬಾಲಕಿಯನ್ನು ಆರೋಪಿಗಳು…

