ಚಾಮರಾಜನಗರದಲ್ಲಿ ಗಾಯಗೊಂಡಿದ್ದ ಕಾಡಾನೆ ಸಾವು | ಗೋಪಿನಾಥಂ ಕಾವೇರಿ ವನ್ಯಧಾಮದಲ್ಲಿ ದುಃಖದ ಘಟನೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ಕೆಲ ದಿನಗಳ ಹಿಂದೆ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಗಂಡಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಈ ಘಟನೆ ಸ್ಥಳೀಯರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಬೇಸರ ಮೂಡಿಸಿದೆ. ಗೋಪಿನಾಥಂ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ ವೇಳೆ ಕಾಡಾನೆ ಗಾಯಗೊಂಡಿರುವುದನ್ನು ಸ್ಥಳೀಯರು ಗಮನಿಸಿದ್ದರು. ತಕ್ಷಣವೇ ಈ ವಿಷಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಗೆ ಚಿಕಿತ್ಸೆ ನೀಡುವ ಕಾರ್ಯ ಆರಂಭಿಸಿದ್ದರು….

Read More