ತಮಿಳುನಾಡು ಫಲಿತಾಂಶ ದಿನ ತಿರುಪತಿಗೆ ತ್ರಿಷಾ ಭೇಟಿ – ವಿಜಯ್ ಗೆಲುವಿಗಾಗಿ ಪ್ರಾರ್ಥನೆ?
ಚೆನ್ನೈ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಮೇ 4) ಭಾರೀ ಕುತೂಹಲ ಮೂಡಿಸಿದ್ದು, ತಮಿಳುನಾಡಿನ ರಾಜಕೀಯ ಬೆಳವಣಿಗೆಗಳತ್ತ ದೇಶದ ಗಮನ ಸೆಳೆದಿದೆ. ಇದೇ ಸಂದರ್ಭದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ತ್ರಿಷಾ, ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಸ್ಥಾನದಲ್ಲಿ ತ್ರಿಷಾ ಕಾಣಿಸಿಕೊಂಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ…

