ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ‘ಶಿವಾನಿ’ ಸಾವು

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜನಪ್ರಿಯ ಹೆಣ್ಣು ಜಿರಾಫೆ ‘ಶಿವಾನಿ’ ಮೃತಪಟ್ಟಿರುವುದು ಪ್ರವಾಸಿಗರು ಮತ್ತು ಸಿಬ್ಬಂದಿಗೆ ಆಘಾತ ತಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷ 10 ತಿಂಗಳ ಶಿವಾನಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಮೇ 3ರಿಂದ ಆಹಾರ ಸೇವನೆ ನಿಲ್ಲಿಸಿದ್ದ ಜಿರಾಫೆಯನ್ನು ಪಶುವೈದ್ಯರ ತಂಡ ನಿಗಾದಲ್ಲಿಟ್ಟು ಚಿಕಿತ್ಸೆ ನೀಡುತ್ತಿತ್ತು. ಆದರೆ ಗುರುವಾರ ಬೆಳಗ್ಗೆ ಸುಮಾರು 11 ಗಂಟೆಗೆ ಶಿವಾನಿ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಸ್ಟ್‌ಮಾರ್ಟಂ ವರದಿಯಲ್ಲಿ…

Read More