ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ ಉಮೇಶ್ ಮೇಟಿ – ಬಾಗಲಕೋಟೆ ಕಾಂಗ್ರೆಸ್ ವಶಕ್ಕೆ
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಮೇಟಿ, ಬಿಜೆಪಿಯ ಹಿರಿಯ ಅಭ್ಯರ್ಥಿ ವೀರಣ್ಣ ಚರಂತಿಮಠರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. ಅಂತಿಮ ಫಲಿತಾಂಶದ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ 97,941 ಮತಗಳು ಚಲಾವಣೆ ಆಗಿದ್ದು, ಬಿಜೆಪಿಯ ವೀರಣ್ಣ ಚರಂತಿಮಠರಿಗೆ 76,075 ಮತಗಳು ಮಾತ್ರ…

