ಹುಟ್ಟುಹಬ್ಬದಂದು ಕೆಎಲ್ ರಾಹುಲ್ ಅಬ್ಬರ: ಆರ್ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಜಯ
ಬೆಂಗಳೂರು: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರೋಮಾಂಚಕ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳಿಂದ ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ 175 ರನ್ಗಳ ಸವಾಲಿನ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಆರಂಭದಲ್ಲಿ ಆಘಾತ ಎದುರಾಯಿತು. ಮೊದಲ 3 ಓವರ್ಗಳಲ್ಲೇ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡು ಕೇವಲ 18 ರನ್ಗಳಿಗೆ ಕುಸಿತ ಕಂಡಿತು. ಈ ಸಂಕಷ್ಟದ ಹೊತ್ತಿನಲ್ಲಿ ಕನ್ನಡಿಗ ಕೆ.ಎಲ್…

