ತುಮಕೂರಿನಲ್ಲಿ ಹಕ್ಕಿ ಜ್ವರ ಭೀತಿ ಹೆಚ್ಚಳ: 50ಕ್ಕೂ ಹೆಚ್ಚು ನವಿಲುಗಳ ಸಾವು, ಜಿಲ್ಲೆಯಲ್ಲಿ ಹೈ ಅಲರ್ಟ್
ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 54ಕ್ಕೂ ಹೆಚ್ಚು ನವಿಲುಗಳ ಸಾವು! ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 54ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿರುವುದು ಆತಂಕ ಹೆಚ್ಚಿಸಿದೆ. ಈಗಾಗಲೇ ಕೆಲವು ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ತುಮಕೂರು ತಾಲೂಕಿನ ಹಲವು ಭಾಗಗಳಲ್ಲಿ ನವಿಲುಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಇದೀಗ ಕುಣಿಗಲ್ನಲ್ಲಿಯೂ ನವಿಲಿನ ಕಳೆಬರ ಪತ್ತೆಯಾಗಿದೆ. ಇದರಿಂದ ಹಕ್ಕಿ ಜ್ವರ ಜಿಲ್ಲೆಯ…

