ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತಗಳು – ಬಸ್ ಪಲ್ಟಿಯಾಗಿ ವಿದ್ಯಾರ್ಥಿ ಸಾವು, ಶಾಮನೂರು ಬಳಿ ಕಾರು ಡಿಕ್ಕಿಗೆ ಇಬ್ಬರ ದುರ್ಮರಣ
ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ನ ಆ್ಯಕ್ಸಲ್ ತುಂಡಾದ ಪರಿಣಾಮ ಬಸ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ…

