ಬೆಂಗಳೂರಿನಲ್ಲಿ ಬೆಳಗ್ಗೆಯೇ ಭಾರಿ ಮಳೆ, 3 ದಿನ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲಿ ಬೆಳಗ್ಗೆಯೇ ಮಳೆರಾಯ ಅಬ್ಬರಿಸಿದ್ದು, ನಗರದ ಹಲವೆಡೆ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್, ಶಾಂತಿನಗರ, ಕೆಆರ್ ಮಾರ್ಕೆಟ್, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುರಿದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಳಗಿನ ಜಾವದಿಂದಲೇ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವೇ ಕ್ಷಣಗಳಲ್ಲಿ ಏಕಾಏಕಿ ಭಾರಿ ಮಳೆ…

