ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ 17 ಜನ ಪಾರು
ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ತೆರಳುತ್ತಿದ್ದ ಪಲ್ಲಕ್ಕಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. KA-57-F6680 ಸಂಖ್ಯೆಯ ಪಲ್ಲಕ್ಕಿ ಬಸ್ನಲ್ಲಿ ಸುಮಾರು 17ಕ್ಕೂ ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಬ್ರೇಕ್ ಲೈನ್ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ…

