ಕಡೂರಿನಲ್ಲಿ ರಾಗಿ ದಂಧೆ: ಪೊಲೀಸರ ವಿರುದ್ಧ ಗಂಭೀರ ಆರೋಪ..!
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ಬೆಚ್ಚಿಬೀಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ರೈತರಿಗೆ ನ್ಯಾಯ ನೀಡಬೇಕಾದ ವ್ಯವಸ್ಥೆಯೇ ಈಗ ಪ್ರಶ್ನಾರ್ಹವಾಗಿದ್ದು, ರಾಗಿ ದಂಧೆಯ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮಧ್ಯರಾತ್ರಿ 11 ಗಂಟೆ ಸುಮಾರಿಗೆ, ಬಿರಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮನೆಯ ಮುಂದೆ ಲಾರಿಗಳ ಮೂಲಕ ಅಕ್ರಮವಾಗಿ ರಾಗಿ ತರಲಾಗುತ್ತಿದೆ ಎಂಬ ಆರೋಪ ಇದೆ. ನಂತರ ಆ ರಾಗಿಯನ್ನು ಟ್ಯಾಕ್ಟರ್‌ಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಆಶ್ಚರ್ಯದ ಸಂಗತಿ ಏನೆಂದರೆ, ಈ ಎಲ್ಲಾ ಘಟನೆಗಳ ನಡುವೆ…

