ಬ್ಯಾಂಕ್ ಒಳಗೆ ಸಿಬ್ಬಂದಿ ಗಲಾಟೆ: ಕ್ಯಾಶಿಯರ್‌ಗೆ ತರಾಟೆ ತೆಗೆದುಕೊಂಡ ಮಹಿಳಾ ಸಿಬ್ಬಂದಿ ವಿಡಿಯೋ ವೈರಲ್

ಚಿಕ್ಕಮಗಳೂರು, ಏಪ್ರಿಲ್ 18: ಬ್ಯಾಂಕ್‌ನಂತಹ ಸಾರ್ವಜನಿಕ ಸ್ಥಳದಲ್ಲಿ ಸಿಬ್ಬಂದಿಗಳ ನಡುವಿನ ಗಲಾಟೆ ಗ್ರಾಹಕರ ಮುಂದೆ ನಡೆದಿರುವ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯ ಎನ್.ಆರ್.ಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಈ ಅಹಿತಕರ ಘಟನೆ ನಡೆದಿದೆ. ಬ್ಯಾಂಕಿನ ದೈನಂದಿನ ಕೆಲಸದ ವೇಳೆ ಮಹಿಳಾ ಸಿಬ್ಬಂದಿ ದೀಪಾ ಮತ್ತು ಕ್ಯಾಶಿಯರ್ ಚಾಣಕ್ಯ ನಡುವೆ ಮಾತಿನ ಚಕಮಕಿ ಆರಂಭವಾಗಿ, ಅದು ತೀವ್ರವಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಘಟನೆಯ ವೇಳೆ ಮಹಿಳಾ ಸಿಬ್ಬಂದಿ ಕ್ಯಾಶಿಯರ್‌ನ ಕೊರಳಪಟ್ಟಿ ಹಿಡಿದು ತರಾಟೆಗೆ ತೆಗೆದುಕೊಂಡ…

Read More

ಹುಟ್ಟುಹಬ್ಬದಂದು ಕೆಎಲ್ ರಾಹುಲ್ ಅಬ್ಬರ: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಜಯ

ಬೆಂಗಳೂರು: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರೋಮಾಂಚಕ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡವು ಹಾಲಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ 175 ರನ್‌ಗಳ ಸವಾಲಿನ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಆರಂಭದಲ್ಲಿ ಆಘಾತ ಎದುರಾಯಿತು. ಮೊದಲ 3 ಓವರ್‌ಗಳಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 18 ರನ್‌ಗಳಿಗೆ ಕುಸಿತ ಕಂಡಿತು. ಈ ಸಂಕಷ್ಟದ ಹೊತ್ತಿನಲ್ಲಿ ಕನ್ನಡಿಗ ಕೆ.ಎಲ್‌…

Read More

ದೆಹಲಿಯಲ್ಲಿ ಭಯೋತ್ಪಾದಕ ಸಂಚು ಭೇದಿಸಿದ ಪೊಲೀಸರು: ಆಟಿಕೆ ಕಾರಿನಲ್ಲಿ IED ದಾಳಿ ಯೋಜನೆ, 4 ಬಂಧನ

ನವದೆಹಲಿ, ಏಪ್ರಿಲ್ 18: ದೆಹಲಿ ಪೊಲೀಸರು ಮಹತ್ವದ ಭಯೋತ್ಪಾದಕ ಸಂಚುವನ್ನು ವಿಫಲಗೊಳಿಸಿದ್ದು, ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರ ಮೂಲದ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಆಟಿಕೆ ಕಾರುಗಳನ್ನು ಬಳಸಿಕೊಂಡು ದಾಳಿ ನಡೆಸಲು ಅವರು ಯೋಜನೆ ರೂಪಿಸಿದ್ದರೆಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ಆರೋಪಿಗಳು ನಗರದಲ್ಲಿನ ಸೂಕ್ಷ್ಮ ಮತ್ತು ಜನದಟ್ಟಣೆಯ ಪ್ರದೇಶಗಳನ್ನು ಗುರಿಯಾಗಿಸಿ ಪೂರ್ವ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇನ್ನಷ್ಟು ಮಂದಿಯನ್ನು ತಮ್ಮ ಗುಂಪಿಗೆ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ವೇಳೆ…

Read More

ಕಡೂರಿನಲ್ಲಿ ರಾಗಿ ದಂಧೆ: ಪೊಲೀಸರ ವಿರುದ್ಧ ಗಂಭೀರ ಆರೋಪ..!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ಬೆಚ್ಚಿಬೀಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ರೈತರಿಗೆ ನ್ಯಾಯ ನೀಡಬೇಕಾದ ವ್ಯವಸ್ಥೆಯೇ ಈಗ ಪ್ರಶ್ನಾರ್ಹವಾಗಿದ್ದು, ರಾಗಿ ದಂಧೆಯ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮಧ್ಯರಾತ್ರಿ 11 ಗಂಟೆ ಸುಮಾರಿಗೆ, ಬಿರಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮನೆಯ ಮುಂದೆ ಲಾರಿಗಳ ಮೂಲಕ ಅಕ್ರಮವಾಗಿ ರಾಗಿ ತರಲಾಗುತ್ತಿದೆ ಎಂಬ ಆರೋಪ ಇದೆ. ನಂತರ ಆ ರಾಗಿಯನ್ನು ಟ್ಯಾಕ್ಟರ್‌ಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಆಶ್ಚರ್ಯದ ಸಂಗತಿ ಏನೆಂದರೆ, ಈ ಎಲ್ಲಾ ಘಟನೆಗಳ ನಡುವೆ…

Read More

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್‌ ಕಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಲಾಗಿದ್ದು, ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಕೊಲೆ ಹಾಗೂ ಪಿತೂರಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅಪರಾಧಿಗೂ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ ₹30 ಸಾವಿರ ದಂಡ ವಿಧಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿಬಿಐ…

Read More

ಯಾದಗಿರಿಯಲ್ಲಿ ಕಾರು-ಬಸ್‌ ಮುಖಾಮುಖಿ ಡಿಕ್ಕಿ, 9 ಮಂದಿ ಬಲಿ!

ಬಸ್‌ ಕಾರ್‌ ನಡುವೆ ಡಿಕ್ಕಿ 9 ಮಂದಿ ಬಲಿ ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಶಾಂತಾಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟು 9 ಮಂದಿ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸ ಎಷ್ಟು ಭೀಕರವಾಗಿತ್ತೆಂದರೆ, ಕಾರು ಮತ್ತು…

Read More

SSLC ತೃತೀಯ ಭಾಷೆ ವಿವಾದಕ್ಕೆ ಹೈಕೋರ್ಟ್ ತೀರ್ಪು: ಗ್ರೇಡ್ ಬದಲು ಅಂಕಗಳೇ ನೀಡಲು ಸರ್ಕಾರಕ್ಕೆ ಸೂಚನೆ..!

‌ಕರ್ನಾಟಕ ಹೈಕೋರ್ಟ್ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತೃತೀಯ ಭಾಷೆ ವಿಷಯಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಅಂಕಗಳನ್ನೇ ನೀಡಬೇಕು ಎಂದು ನಿರ್ದೇಶನ ನೀಡಿದೆ. ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ…

Read More

ಅನುಮತಿ ಪಡೆಯದೆ ರೋಡ್​ ಶೋ ನಡೆಸಿದ ದಳಪತಿ; ವಿಜಯ್​ ಮೇಲೆ ಕೇಸ್​ ದಾಖಲು!

ಚೆನ್ನೈ:ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಈ ನಡುವೆ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ Thalapathy Vijay ವಿರುದ್ಧ ಪ್ರಕರಣ ದಾಖಲಾಗಿರುವುದು ಗಮನ ಸೆಳೆದಿದೆ. ಗುರುವಾರ (ಏಪ್ರಿಲ್ 16) ಚೆನ್ನೈನ ಮೆಂಬ್ಲಮ್ ಪೊಲೀಸ್ ಠಾಣೆಯಲ್ಲಿ ವಿಜಯ್ ಸೇರಿದಂತೆ ಬುಸ್ಸಿ ಆನಂದ್ ಮತ್ತು ಅಪ್ಪನ್ನು ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು…

Read More

‘ನಾನು ಊರು ಬಿಡಲು ದರ್ಶನ್‌ ಮೇಲಿನ ಗೌರವ ಕಾರಣʼ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು: ಇಷ್ಟು ವರ್ಷಗಳಿಂದ ನಾಪತ್ತೆಯಾಗಿದ್ದ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇದೀಗ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ, ತಮ್ಮ ಜೀವನದ ಸಂಕಷ್ಟಕರ ಅಧ್ಯಾಯವನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ್, ತಮ್ಮ ನಾಪತ್ತೆಯ ಹಿಂದಿನ ಕಾರಣಗಳನ್ನು ವಿವರಿಸುತ್ತಾ, ‘ನನ್ನಿಂದ ಹಲವರಿಗೆ ತೊಂದರೆ ಆಗಿದೆ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು. ಇಂಜಿನಿಯರಿಂಗ್ ಮುಗಿಸಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಆರಂಭಿಸಿದ ಅವರು ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದಾಗಿ ಹೇಳಿದರು. ಸಿನಿಮಾ ನಿರ್ಮಾಣ, ಡಿಸ್ಟ್ರಿಬ್ಯೂಷನ್…

Read More

ಸ್ಕ್ರಾಪ್ ಗೋಡೋನ್‌ಗೆ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ ನಷ..!

ಆನೇಕಲ್ ತಾಲ್ಲೂಕಿನ ಗೌರೇನಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರಾಪ್ ಗೋಡೋನ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗೋಡೋನ್ ಒಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಕಾಣುತ್ತಿದ್ದಂತೆ ತಕ್ಷಣ ಹೊರಗೆ ಓಡಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಗೋಡೋನ್‌ನಲ್ಲಿ ಕೆಮಿಕಲ್ ವೇಸ್ಟ್ ಡ್ರಮ್‌ಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದು, ಬೆಂಕಿ ವೇಗವಾಗಿ ವ್ಯಾಪಿಸಲು ಕಾರಣವಾಗಿದೆ…

Read More