ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ಸಿಐಡಿಗೆ ಹಸ್ತಾಂತರ: ಪೊಲೀಸ್ ಇಲಾಖೆಯ ಹಗರಣದ ತನಿಖೆಗೆ ಪರಮೇಶ್ವರ್ ಆದೇಶ! ಏನಿದು ವಿವಾದ?
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸುತ್ತ ಸುತ್ತಿಕೊಂಡಿರುವ ವಿವಾದವು ಈಗ ರಾಜ್ಯ ಮಟ್ಟದ ಹಗರಣವಾಗಿ ಮಾರ್ಪಟ್ಟಿದೆ. ಇಲಾಖೆಯ ಒಳಗಿನ ಶಿಸ್ತು ಮತ್ತು ಭ್ರಷ್ಟಾಚಾರದ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸಿರುವುದಾಗಿ ಘೋಷಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಆರೋಪಗಳು ಕೇವಲ ಒಂದು ಘಟನೆಗೆ ಸೀಮಿತವಾಗಿಲ್ಲ. ಅವರ ವಿರುದ್ಧ…

