SSLC ತೃತೀಯ ಭಾಷೆ ವಿವಾದಕ್ಕೆ ಹೈಕೋರ್ಟ್ ತೀರ್ಪು: ಗ್ರೇಡ್ ಬದಲು ಅಂಕಗಳೇ ನೀಡಲು ಸರ್ಕಾರಕ್ಕೆ ಸೂಚನೆ..!
ಕರ್ನಾಟಕ ಹೈಕೋರ್ಟ್ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತೃತೀಯ ಭಾಷೆ ವಿಷಯಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಅಂಕಗಳನ್ನೇ ನೀಡಬೇಕು ಎಂದು ನಿರ್ದೇಶನ ನೀಡಿದೆ. ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ…

