ಚಾಮರಾಜನಗರದಲ್ಲಿ ಭೀಕರ ಅಪಘಾತ: ಬಾಲಕನಿಗೆ ಟೆಂಪೋ ಡಿಕ್ಕಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೈಕಲ್ ಸವಾರಿ ಮಾಡುತ್ತಿದ್ದ 11 ವರ್ಷದ ಬಾಲಕ ಯಶವಂತ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ ಬಾಲಕನಿಗೆ ಕುಟುಂಬಸ್ಥರು ಇತ್ತೀಚೆಗೆ ಸೈಕಲ್ ಕೊಡಿಸಿದ್ದರು. ಸೈಕಲ್ ಹೊಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟೆಂಪೋವನ್ನು…

Read More

ಬೆಂಗಳೂರಿನಲ್ಲಿ ಲಿವಿನ್ ರಿಲೇಷನ್‌ಶಿಪ್ ದುರಂತ – ಅನುಮಾನಕ್ಕೆ ಯುವತಿ ನೇಣು

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿಯ ಜಗಳ ದುರಂತ ಅಂತ್ಯ ಕಂಡ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ನಡೆದಿದೆ. ಮೇಘಾಲಯ ಮೂಲದ 34 ವರ್ಷದ ಅಗತ ಬೈತಿಯಂಗುಂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅಗತ ಬೈತಿಯಂಗುಂ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ಮಣಿಪುರ ಮೂಲದ ನವಾಜ್ ಶರೀಫ್ (26) ಜೊತೆ ಕಳೆದ ಮೂರು ವರ್ಷಗಳಿಂದ ಲಿವಿನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇಬ್ಬರ ನಡುವೆ 8 ವರ್ಷಗಳ ವಯಸ್ಸಿನ ಅಂತರವಿದ್ದು,…

Read More

ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದ ಚಂದ್ರೇಗೌಡ ಎಂಬಾತ ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಆರೋಪಿ ಮಹಿಳೆಯರ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಸಂಗ್ರಹಿಸಿಕೊಂಡು, ಅವುಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್ ಅಧಿಕಾರಿ, ವಕೀಲ ಹಾಗೂ ಮಾಧ್ಯಮ ಪ್ರತಿನಿಧಿ ಎಂದು ನಕಲಿ ಪರಿಚಯ ನೀಡಿ ಮಹಿಳೆಯರನ್ನು ಮೋಸಗೊಳಿಸುತ್ತಿದ್ದ ಎನ್ನಲಾಗಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬಳಿಗೆ “ನಿನ್ನನ್ನು ಮದುವೆಯಾಗುತ್ತೇನೆ” ಎಂದು…

Read More

ಲ್ಯಾಬ್‌ನಲ್ಲಿ ಸುರಕ್ಷತೆ ಪ್ರಶ್ನೆ: ಮಹಿಳೆಗೆ ಜೀವ ಬೆದರಿಕೆ ಆರೋಪ

ಬೆಂಗಳೂರು ನಗರದಲ್ಲಿ ಆತಂಕ ಮೂಡಿಸಿದ ಘಟನೆ!ಬ್ಯಾಡರಹಳ್ಳಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ತಪಾಸಣೆಗೆ ಹೋದ ಮಹಿಳೆಗೆ ಕಿರುಕುಳ ಆರೋಪ ಕೇಳಿಬಂದಿದೆ. ರಕ್ತದ ಮಾದರಿ ತೆಗೆದುಕೊಳ್ಳುವ ವೇಳೆ ನಿರ್ಲಕ್ಷ್ಯ ತೋರಿದ ಲ್ಯಾಬ್ ಸಿಬ್ಬಂದಿ, ಮಹಿಳೆ ಪ್ರಶ್ನಿಸಿದಾಗ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲ, ಕೆಲ ದಿನಗಳ ನಂತರ ಮಹಿಳೆಯ ಮನೆಗೆ ತೆರಳಿ ವಿಷಯ ಹೊರಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ…

Read More

ಆಡುಗೋಡಿಯಲ್ಲಿ ಯುವತಿಯ ಭೀಕರ ಸಾವು: ಪೂಜಾ ದತ್ತ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು, ಏ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಯುವತಿ ಪೂಜಾ ದತ್ತ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆಘಾತ ಮೂಡಿಸಿದೆ. ಆಡುಗೋಡಿ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ಪೂಜಾ ದತ್ತ ಅವರ ಮೃತದೇಹ ಬೆತ್ತಲೆ ಹಾಗೂ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಒಳನುಗ್ಗಿದಾಗ, ಪೂಜಾ ಅವರ ಮೃತದೇಹ ಭೀಕರ…

Read More