ಬೆಂಗಳೂರುದಲ್ಲಿ ತರಕಾರಿ ಬೆಲೆ ಭಾರಿ ಏರಿಕೆ | ಬೀನ್ಸ್ ಕೆಜಿ ₹160 | ಗ್ರಾಹಕರು ಕಂಗಾಲು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ 15 ದಿನಗಳಲ್ಲಿ ನಗರದ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ದುಪ್ಪಟ್ಟಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ವಿಶೇಷವಾಗಿ ಬೀನ್ಸ್ ದರ ಕೆಜಿಗೆ ₹160 ತಲುಪಿರುವುದು ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ ಹಾಗೂ ಅಕಾಲಿಕ ಮಳೆಯಿಂದ ತರಕಾರಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಭಾಗಗಳಲ್ಲಿ ಬೆಳೆ ನಾಶವಾಗಿರುವುದರಿಂದ ಮಾರುಕಟ್ಟೆಗೆ ಬರುವ ತರಕಾರಿಗಳ ಪ್ರಮಾಣ ಶೇ.30 ರಿಂದ…

