ನಾಲ್ವರು ಸಾಗುತ್ತಿದ್ದ ಬೈಕ್ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್
ಶೀರ್ಷಿಕೆ:ನಾಲ್ವರು ಸಾಗುತ್ತಿದ್ದ ಬೈಕ್ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್ ರಾಯಚೂರು:ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ತೆರಳಿದ್ದ ನಾಲ್ವರು ಒಂದೇ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಜ್ಜಿಹೋಗಿದ್ದು, ಮೃತರ ದೇಹಗಳು ನಜ್ಜುಗುಜ್ಜಾಗಿ…

