ರಾಯಚೂರಿನಲ್ಲಿ ಭೀಕರ ಅಪಘಾತ: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಅರಗಿನಮರ ಕ್ಯಾಂಪ್ ನಿವಾಸಿ 17 ವರ್ಷದ ಭೂಮಿಕಾ ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ…

