ಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ: ಸಭೆ, ಸಮಾರಂಭಕ್ಕೆ ಜಿಲ್ಲಾಡಳಿತ ಬ್ರೇಕ್
ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ದಿನದಿಂದ ದಿನಕ್ಕೆ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಸಂಘರ್ಷ ತೀವ್ರವಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಠದ ಆವರಣದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಬಾರದು ಎಂದು ಮೇ 1ರಿಂದ 30ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವೆ ಕಳೆದ ಕೆಲವು ವಾರಗಳಿಂದ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದಲ್ಲಿ ಮಾರ್ಚ್ 10ರಿಂದ ವಿವಿಧ ಗುಂಪುಗಳಿಂದ ನಿರಂತರ ಸಭೆಗಳು, ಸುದ್ದಿಗೋಷ್ಠಿಗಳು ನಡೆಯುತ್ತಿದ್ದು, ಪರಿಸ್ಥಿತಿ…

