
ಚೆನ್ನೈ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಮೇ 4) ಭಾರೀ ಕುತೂಹಲ ಮೂಡಿಸಿದ್ದು, ತಮಿಳುನಾಡಿನ ರಾಜಕೀಯ ಬೆಳವಣಿಗೆಗಳತ್ತ ದೇಶದ ಗಮನ ಸೆಳೆದಿದೆ. ಇದೇ ಸಂದರ್ಭದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ತ್ರಿಷಾ, ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಸ್ಥಾನದಲ್ಲಿ ತ್ರಿಷಾ ಕಾಣಿಸಿಕೊಂಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಜೊತೆಗೆ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಕೂಡ ಇಂದು ಹೊರಬೀಳುತ್ತಿರುವ ಹಿನ್ನೆಲೆ, ನಟ ವಿಜಯ್ ಹಾಗೂ ಅವರ ಪಕ್ಷ TVK ಗೆಲುವಿಗಾಗಿ ತ್ರಿಷಾ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಚರ್ಚೆ ಅಭಿಮಾನಿಗಳ ವಲಯದಲ್ಲಿ ಜೋರಾಗಿದೆ. ಆದರೆ ಈ ಕುರಿತು ತ್ರಿಷಾ ಅಥವಾ ಅವರ ತಂಡದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ.
ನಟಿ ತ್ರಿಷಾ ಮತ್ತು ವಿಜಯ್ ನಡುವಿನ ಸ್ನೇಹದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ತಿರುಪತಿ ಭೇಟಿ ಇದೀಗ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

