‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಡು ರಸ್ತೆಯಲ್ಲಿ ನಿರ್ಮಾಪಕರನ್ನು ಅಡ್ಡಹಾಕಿದ ಹಂಸ

ಸ್ಟಾರ್ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ವಸುದೇವ ಕುಟುಂಬ’ ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ ಹಾಗೂ ಹಿರಿಯ ನಟ ಅವಿನಾಶ್ ಸೇರಿದಂತೆ ಪ್ರಮುಖ ಕಲಾವಿದರು ನಟಿಸುತ್ತಿರುವ ಈ ಧಾರಾವಾಹಿಯ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಕಳೆದ ಕೆಲವು ತಿಂಗಳುಗಳಿಂದ ಸಂಭಾವನೆ ನೀಡಿಲ್ಲ ಹಾಗೂ ಯೂನಿಟ್ ಸದಸ್ಯರಿಗೆ ಸರಿಯಾದ ಆಹಾರ ಮತ್ತು ಸೌಲಭ್ಯ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು ನಾಗರಬಾವಿಯ ಹೋಟೆಲ್ ಬಳಿ ನಿರ್ಮಾಪಕರನ್ನು ಹಂಸ ಹಾಗೂ ಚೈತ್ರಾ ಸೇರಿದಂತೆ ಯೂನಿಟ್ ಸದಸ್ಯರು ಎದುರಿಸಿದ್ದಾರೆ.

ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ನಿರ್ಮಾಪಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಹಂಸ ಅವರು ನಿರ್ಮಾಪಕರ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *