ಯಾದಗಿರಿಯಲ್ಲಿ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್ – ಲಂಚ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸದಿರಲು ಹಾಗೂ ಮತ್ತೊಂದು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಆನಂದ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಪೊಲೀಸ್ ವಸತಿ ಗೃಹದಲ್ಲಿ ಹಣ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್‌ರನ್ನು ರೆಡ್ ಹ್ಯಾಂಡೆಡ್ ಆಗಿ ಬಂಧಿಸಿದೆ.

ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *