ಸ್ಕ್ರಾಪ್ ಗೋಡೋನ್‌ಗೆ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ ನಷ..!

ಆನೇಕಲ್ ತಾಲ್ಲೂಕಿನ ಗೌರೇನಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರಾಪ್ ಗೋಡೋನ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗೋಡೋನ್ ಒಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಕಾಣುತ್ತಿದ್ದಂತೆ ತಕ್ಷಣ ಹೊರಗೆ ಓಡಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಗೋಡೋನ್‌ನಲ್ಲಿ ಕೆಮಿಕಲ್ ವೇಸ್ಟ್ ಡ್ರಮ್‌ಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದು, ಬೆಂಕಿ ವೇಗವಾಗಿ ವ್ಯಾಪಿಸಲು ಕಾರಣವಾಗಿದೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಆನೇಕಲ್ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಅನಧಿಕೃತ ಸ್ಕ್ರಾಪ್ ಗೋಡೋನ್‌ಗಳು ಹೆಚ್ಚಾಗುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳದೆ ಪಂಚಾಯತ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

Leave a Reply

Your email address will not be published. Required fields are marked *